ಸಾಮಾಜಿಕ ಭದ್ರತಾ ವಿಮಾ ಯೋಜನೆಗಳ ಜಾಗೃತಿ ಕಾರ್ಯಕ್ರಮ ವಿಮಾ ಯೋಜನೆಗಳು ಗ್ರಾಮೀಣ ಕುಟುಂಬದ ಆರ್ಥಿಕ ಭದ್ರತೆಗೆ ಪೂರಕ ಗ್ರಾಮೀಣ ಪ್ರದೇಶದ ಕುಟುಂಬಗಳ ಆರ್ಥಿಕ ಭದ್ರತೆಗೆ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಭೀಮಾ ಯೋಜನೆಗಳು ಪೂರಕವಾಗಿವೆ ಎಂದು ಯಾದಗಿರಿ ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಶ್ರೀ ವೆಂಕಟೇಶ ಬಿ ಚಟ್ನಳ್ಳಿ ಅವರು ಹೇಳಿದರು. ಅವರು ಸೆಪ್ಟೆಂಬರ್ 03ರಂದು ಶಹಾಪುರ ತಾಲೂಕಿನ ಮದ್ದರಕಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ, ಸರಕಾರದ ಸಾಮಾಜಿಕ ಭದ್ರತಾ ವಿಮಾ ಯೋಜನೆಗಳಾದ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಜೀವನ್ ಜ್ಯೋತಿ