ಧಾರವಾಡ ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದಾಗಿ ಹೆಸರು, ಉದ್ದು, ಸೋಯಾಬೀನ್ ಬೆಳೆಗಳು ಹಾನಿಗೊಳಗಾಗಿವೆ. ಈ ಹಿನ್ನೆಲೆಯಲ್ಲಿ, ರೈತರಿಗೆ ಬೆಳೆಹಾನಿ ಪರಿಹಾರ ಬಿಡುಗಡೆ ಮಾಡುವಂತೆ ಧಾರವಾಡ ಧ್ವನಿ ವತಿಯಿಂದ ಸಚಿವ ಸಂತೋಷ ಲಾಡ್ ಹಾಗೂ ಜಿಲ್ಲಾಧಿಕಾರಿ ದಿವ್ಯಪ್ರಭು ಅವರಿಗೆ ಸೋಮವಾರ ಬೆಳಗ್ಗೆ 11 ಗಂಟೆಗೆ ಧಾರವಾಡ ಪ್ರವಾಸಿ ಮಂದಿರದಲ್ಲಿ ಮನವಿ ಸಲ್ಲಿಸಲಾಯಿತು.