ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕಾಡಂಚಿನ ಗ್ರಾಮವಾದ ಗುಂಡ್ಲುಪೇಟೆ ತಾಲೂಕಿನ ಮಂಗಲ ಗ್ರಾಮದಲ್ಲಿ ಅಳವಿನಂಚಿನಲ್ಲಿರುವ ಕತ್ತೆ ಕಿರುಬ ಓಡಾಡಿದೆ. ಮಂಗಲ ಗ್ರಾಮದ ಮಹದೇಶ್ವರ ಕೆರೆ ಹಾಗೂ ಸುತ್ತಮುತ್ತಲಿನ ಜಮೀನಿನಲ್ಲಿ ಕತ್ತೆ ಕಿರುಬ ಓಡಾಡುತ್ತಿರುವ ದೃಶ್ಯವನ್ನು ಸ್ಥಳೀಯರಾದ ಕುಮಾರ್ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಇದೀಗ ಆ ವಿಡಿಯೋ ಸಾಕಷ್ಟು ವೈರಲ್ ಆಗಿದೆ. ತಮಿಳುನಾಡಿನ ಮಯಾರ್ ಸೇರಿದಂತೆ ಮುದುಮಲೈ ಅರಣ್ಯ ಪ್ರದೇಶದ ಕೆಲ ಭಾಗದಲ್ಲಿ ಹೈನಾ ಇದ್ದು ಈಗೀಗ ಬಂಡೀಪುರದಲ್ಲೂ ಕಾಣಿಸಿಕೊಳ್ಳುತ್ತಿದೆ.