ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿ ವರ್ಷಿತಾ ಹತ್ಯೆ ಖಂಡಿಸಿ ಕೆ.ಆರ್.ಎಸ್. ಪಕ್ಷದ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಯಿತು. ಸರಕಾರದ ವಿರುದ್ಧ ಬೀದಿಗಿಳಿದ ಕೆ.ಆರ್.ಎಸ್ ಪಾರ್ಟಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಅಂಬೇಡ್ಕರ್ ಸರ್ಕಲ್ ನಿಂದ ಡಿಸಿ ವೃತ್ತದ ವರೆಗೆ ಪ್ರತಿಭಟನಾ ರ್ಯಾಲಿ ನಡೆಸುವ ಮೂಲಕ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ವರ್ಷಿತಾ ಸಾವಿಗೆ ಸಾಂತ್ವನ ಹೇಳದ ಸರಕಾರ ಎಂದು ಘೋಷಣೆ ಕೂಗಿದರು. ವರ್ಷಿತಾ ತಾಯಿ ಸೇರಿ ಕುಟುಂಬಸ್ಥರು ಪ್ರತಿಭಟನೆಯಲ್ಲಿ ಭಾಗಿಯಾಗಿ, ಅಪರಾಧಿಗಳ ವಿರುದ್ಧ ಕ್ರಮಕ್ಕೆ ಮನವಿ ಸಲ್ಲಿಕೆ ಮಾಡಿದರು. ಡಿಸಿ ಕಚೇರಿ ಮೂಲಕ ಸರಕಾರಕ್ಕೆ ಮನವಿ ಪತ್ರ ಸಲ್ಲಿಕೆ ಮಾಡಿದರು