ಹಾಸನ : ಹಬ್ಬದ ದಿನವೇ ನಗರದಲ್ಲಿ ಯುವಕನೊಬ್ಬನ ಬರ್ಬರ ಕೊಲೆ ನಡೆದಿದ್ದು ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ ಮಾಡಿರುವ ಘಟನೆ ಹಾಸನ ನಗರದ ದೊಡ್ಡಮಂಡಿಗನಹಳ್ಳಿಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಅಂಕಿತ್ (26) ಕೊಲೆಯಾದ ವ್ಯಕ್ತಿ ಯಾಗಿದ್ದು ಹಾಸನ ತಾಲ್ಲೂಕಿನ ಯರೇಹಳ್ಳಿ ಗ್ರಾಮದ ಈತ ಬೈಕ್ ಶೋರೂಂ ನಲ್ಲಿ ಕೆಲಸ ಮಾಡುತ್ತಿದ್ದ ನಿನ್ನೆ ರಾತ್ರಿ ಬೈಕ್‌ನಲ್ಲಿ ರಾಗಿಮುದ್ದನಹಳ್ಳಿ ಗ್ರಾಮದ ಕಡೆಗೆ ತೆರಳುತ್ತಿದ್ದ ಅಂಕಿತ್ ನನ್ನು ಅಟ್ಯಾಕ್ ಮಾಡಿರುವ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಅಂಕಿತ್‌ನನ್ನು ಕೊಂದು ಎಸ್ಕೇಪ್ ಆಗಿದ್ದಾರೆ.ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.