ಬಿಣಗಾದ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್‌ನಲ್ಲಿ ಅಳವಡಿಸಲಾಗಿದ್ದ ವಿದ್ಯುತ್ ಕಂಬಕ್ಕೆ ಕೇರಳ ನೋಂದಣಿಯ ಕಾರು ಡಿಕ್ಕಿ ಹೊಡೆದಿರುವ ಘಟನೆ ಗುರುವಾರ ಮಧ್ಯಾಹ್ನ 2.30ರ ಸುಮಾರು ಸಂಭವಿಸಿದೆ. ಗೋವಾ ಮಾರ್ಗವಾಗಿ ಅತಿ ವೇಗವಾಗಿ ಆಗಮಿಸಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ವಿದ್ಯುತ್ ಕಂಬ ತುಂಡಾಗಿ ಬಿದ್ದಿದ್ದು ಕಾರು ಸಂಪೂರ್ಣವಾಗಿ ಜಖಂ ಗೊಂಡಿದೆ. ಕಾರಿನಲ್ಲಿ ಇದ್ದವರಿಗೆ ಸಣ್ಣ ಪುಟ್ಟ ಗಾಯವಾಗಿದೆ.