ಹಾಸ್ಟೆಲ್ ಹಾಗೂ ವಸತಿ ಶಾಲಾ ಕಾಲೇಜು ವಿದ್ಯಾರ್ಥಿಗಳ ಆಹಾರ ಭತ್ಯೆ ಹೆಚ್ಚಳ, ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ, ವಸತಿ ನಿಲಯಗಳಿಗೆ ಸ್ವಂತ ಕಟ್ಟಡ, ಕನಿಷ್ಠ ಮೂಲಭೂತ ಸೌಕರ್ಯಗಳ ಈಡೇರಿಕೆಗೆ ಆಗ್ರಹಿಸಿ ಹಾವೇರಿಯ ಜಿಲ್ಲಾ ಗುರುಭವನದಲ್ಲಿ ಅ.4 ಮತ್ತು 5ರಂದು ಎಸ್ ಎಫ್ ಐ ರಾಜ್ಯ ಮಟ್ಟದ ಹಾಸ್ಟೆಲ್ ವಿದ್ಯಾರ್ಥಿಗಳ ಸಮಾವೇಶವನ್ನು ಆಯೋಚಿಸಿದೆ ಎಂದು ಎಸ್‌ಎಫ್‌ಐ ರಾಜ್ಯಾಧ್ಯಕ್ಷಶಿವಪ್ಪ ಅಂಬ್ಲಿಕಲ್ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.