ರಾಜ್ಯ ಸರ್ಕಾರದ ಸಂಪುಟ ಉಪಸಮಿತಿ ನೇಮಕ ಹಿನ್ನೆಲೆಯಲ್ಲಿ ಬಿಎಂಐಸಿ ನೈಸ್ ಕಂಪನಿಗೆ ಯಾವುದೇ ರಸ್ತೆ ನಿರ್ಮಾಣ ಕಾಮಗಾರಿ ನಡೆಸದಂತೆ ನಿರ್ಬಂಧ ವಿಧಿಸಲು ಹಾಗೂ ಅಕ್ರಮ-ಕಾನೂನು ಬಾಹಿರ ರಸ್ತೆ ಕಾಮಗಾರಿ ವಿರುದ್ಧ ಪ್ರತಿಭಟಿಸುವ ರೈತರಿಗೆ ಹಾಗೂ ರೈತ ಮುಖಂಡರಿಗೆ ರಕ್ಷಣೆ ನೀಡಲು ಆಗ್ರಹಿಸಿ ರಾಜ್ಯಾದಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಕೆಪಿಆರ್‌ಎಸ್ ತಾಲ್ಲೂಕು ಅಧ್ಯಕ್ಷ ಪಿ.ಶ್ರೀನಿವಾಸ್ ಅವರು,ಶುಕ್ರವಾರ ತಹಸೀಲ್ದಾರ್‌ಗೆ ಮನವಿ ನೀಡಿ ಆಗ್ರಹಿಸಿದರು.ಪಟ್ಟಣದ ತಾಲ್ಲೂಕು ಕಛೇರಿ ಮುಂಭಾಗ ಪ್ರತಿಭಟನೆ ಹಮ್ಮಿಕೊಂಡು ಮಾತನಾಡಿದರು