ಚಿತ್ರದುರ್ಗ:-.ಸೆ.04: ಈದ್ ಮಿಲಾದ್ ಹಬ್ಬ ಹಾಗೂ ಹಿಂದೂ ಮಹಾ ಗಣಪತಿ ವಿಸರ್ಜನೆ ಮೆರವಣಿಗೆ ಹಿನ್ನಲೆಯಲ್ಲಿ, ಸಾರ್ವಜನಿಕ ಶಾಂತಿ ಪಾಲನೆ, ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ವಿವಿಧ ದಿನಗಳಂದು ಬೆಳಿಗ್ಗೆ 06 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಹಲವೆಡೆ ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಆದೇಶ ಹೊರಡಿಸಿದ್ದಾರೆ. ಸೆ.5 ರಂದು ಬೆ. 06 ರಿಂದ ಮಧ್ಯರಾತ್ರಿ 12 ರವರೆಗೆ ಈದ್ ಮಿಲಾದ್ ಹಬ್ಬ ಪ್ರಯುಕ್ತ ಚಿತ್ರದುರ್ಗ ನಗರ ಮತ್ತು ತಾಲ್ಲೂಕು ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.