ದಾವಣಗೆರೆ ನಗರದ ಅಭಿವೃದ್ಧಿಗೆ ಇದೀಗ 50 ಕೋಟಿ ರೂ ಅನುದಾನ ಬಿಡುಗಡೆಯಾಗಿದ್ದು, ವಿವಿಧ ಕಾಮಗಾರಿಗಳು ಆರಂಭವಾಗಲಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹೇಳಿದರು. ಶುಕ್ರವಾರ ಸಂಜೆ ದಾವಣಗೆರೆ ನಗರದ ಪಿಬಿ ರಸ್ತೆಯ ತೋಟಗಾರಿಕೆ ಇಲಾಖೆ ಕಚೇರಿ ಆವರಣದಲ್ಲಿ ಇಂದಿರಾ ಕ್ಯಾಂಟೀನ್, ಬೀದಿ ದೀಪಗಳ ಉದ್ಘಾಟನೆ ಹಾಗೂ 11 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆಯ ನಂತರ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಮಾಜಿ ಮೇಯರ್‌ಗಳ ಭಾವಚಿತ್ರಗಳ ಅನಾವರಣ ಮತ್ತು 2025-26 ನೇ ಸಾಲಿನ ಎಸ್‌ಎಫ್‌ಸಿ ಮುಕ್ತ ನಿಧಿ ಹಾಗೂ ಎಸ್ಸಿಎಸ್ಪಿ, ಟಿಎಸ್ಪಿ, ಪಾಲಿಕೆಯ ಸಾಮಾನ್ಯ ನಿಧಿಯ ಅನುದಾನದಡಿಯಲ್ಲಿ 14 ಕೋಟಿ ರೂ ಮೊತ್ತದ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.