ಮುಧೋಳ ತಾಲೂಕಿನ ಮಿರ್ಜಿ ಗ್ರಾಮದಕ್ಕೆ ಪ್ರತಿ ವರ್ಷ ಪ್ರವಾಹಕ್ಕೆ ಈಡಾಗುತ್ತಿದ್ದು, ಗ್ರಾಮದ ಸಂತ್ರಸ್ತರಿಗೆ ಶಾಶ್ವತ ಪರಿಹಾರಕ್ಕೆ ಕ್ರಮಕೈಗೊಳ್ಳುವಂತೆ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಜಾನಕಿ ಕೆ.ಎಂ ಅಧಿಕಾರಿಗಳಿಗೆ ಸೂಚಿಸಿದರು.ಶುಕ್ರವಾರ ಮುಧೋಳ ತಾಲೂಕಿನ ಮಿರ್ಜಿ ಗ್ರಾಮದಲ್ಲಿ ಪ್ರವಾಹಕ್ಕೆ ತುತ್ತಾದ ಮನೆಗಳನ್ನು ವೀಕ್ಷಣೆ ಮಾಡಿ ನಂತರ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಸಂತ್ರಸ್ತರ ಯೋಗಕ್ಷೇಮ ವಿಚಾರಿಸಿ ಮಾತನಾಡಿದರು.