ಕಾಂಗ್ರೆಸ್ ಪಕ್ಷದಿಂದ ತಾಪಂ, ಜಿಪಂ ಚುನಾವಣೆಗೆ ಯಾರೇ ನಿಂತರು ಗೆಲ್ಲಿಸುವ ಮೂಲಕ ನನಗೆ ಶಕ್ತಿ ತುಂಬಬೇಕು ಎಂದು ಶಾಸಕ ಎಚ್.ಎಂ.ಗಣೇಶಪ್ರಸಾದ್ ಮನವಿ ಮಾಡಿದರು. ಹೊರೆಯಾಲ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಸೋಮವಾರ ಗುದ್ದಲಿಪೂಜೆ ನೆರವೇರಿಸಿದ ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ತಾಪಂ, ಜಿಪಂ ಚುನಾವಣೆ ಶೀಘ್ರವೇ ಘೋಷಣೆಯಾಗುವ ನಿರೀಕ್ಷೆಯಿದೆ. ಆದ್ದರಿಂದ ಗುಂಡ್ಲುಪೇಟೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ 6 ಜಿಪಂ ಮತ್ತು 20 ತಾಪಂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದಿಂದ ನಿಲ್ಲುವ ಅಭ್ಯರ್ಥಿಗಳಿಗೆ ಯಾವುದೇ ಗೊಂದಲಕ್ಕೆ ಒಳಗಾಗದೆ ಮತ ನೀಡಿ ಗೆಲ್ಲಿಸಬೇಕು ಎಂದು ತಿಳಿಸಿದರು.