ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಚಿಕ್ಕಣಜಿ ಗ್ರಾಮದ ಬಳಿ ಬೈಕ್ ಸವಾರರ ಮೇಲೆ ಗುಂಪೊಂದು ಹಲ್ಲೆ ಮಾಡಿದೆ. ಘಟನೆಯಲ್ಲಿ ಬೈಕಸವಾರರಾದ ಮಂಜುನಾಥ ದೊಡ್ಡಮನಿ ಮತ್ತು ಮಾಲತೇಶ್ ದೊಡ್ಡಮನಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕು ಕಾಗಿನೆಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಐವರು ಆರೋಪಿಗಳನ್ಬು ವಶಕ್ಕೆ ಪಡೆದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.