ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ ಭಾರಿ ನೀರು ಯಡೂರ ಗ್ರಾಮದ ಗೋಶಾಲೆ ಜಲಾವೃತ. ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಹಿಂಭಾಗದಲ್ಲಿರುವ ಗೋಶಾಲೆ ಶುಕ್ರವಾರ ಸಂಪೂರ್ಣವಾಗಿ ಜಲಾವೃತಗೊಂಡಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತು, ಗೋಶಾಲೆಯಲ್ಲಿದ್ದ ಎಲ್ಲಾ ಹಸುಗಳನ್ನು ಸುರಕ್ಷತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಮಹಾರಾಷ್ಟ್ರದ ಜಲಾಶಯಗಳಿಂದ ಹೆಚ್ಚಿನ ಪ್ರಮಾಣದ ನೀರು ಬಿಡುಗಡೆಯಾಗಿದ್ದು, ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ