ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಕರ್ನಾಟಕ ರಾಜ್ಯದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆಯನ್ನು ಸೆಪ್ಟಂಬರ್ ೧೫ ರಿಂದ ಆರಂಭಿಸಲಾಗುತ್ತಿದ್ದು, ಎಲ್ಲ ಲಿಂಗತ್ವ ಅಲ್ಪಸಂಖ್ಯಾತರು ತಮ್ಮ ನಿಖರವಾದ ಮಾಹಿತಿ ನೀಡಿ ಸಹಕರಿಸುವಂತೆ ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೆ.ಜೆ.ಜಾರ್ಜ್ ಮನವಿ ಮಾಡಿದರು. ನಗರದ ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಇಂದು ಸಮೀಕ್ಷೆಯ ಬಿತ್ತಿ ಪತ್ರಗಳನ್ನು ಬಿಡುಗಡೆಗೊಳಿಸುವ ಮೂಲಕ ಸಮೀಕ್ಷೆಗೆ ಚಾಲನೆ ನೀಡಿ ಅವರು ಮಾತನಾಡಿದರು.