Download Now Banner

This browser does not support the video element.

ಸಿರಗುಪ್ಪ: ತಾಲೂಕಿನ ಸೂಗೂರು ಗ್ರಾಮದ ಬಳಿಯ ಹಳ್ಳದ ನೀರಿನ ಪ್ರವಾಹದದಲ್ಲಿ ಕೊಚ್ಚಿ ಹೋಗ್ತಿದ್ದ ವ್ಯಕ್ತಿಯ ರಕ್ಷಣೆ

Siruguppa, Ballari | Sep 12, 2025
ರಭಸವಾಗಿ ಹರಿಯುತ್ತಿದ್ದ ಹಳ್ಳದ ನೀರಿನ ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದವನ ರಕ್ಷಣೆ ಮಾಡಿದ ಘಟನೆ ಶುಕ್ರವಾರ ಸಂಜೆ 4ಗಂಟೆಗೆ ಜರುಗಿದೆ. ಸಿರುಗುಪ್ಪ ತಾಲ್ಲೂಕಿನ ಆಂಧ್ರದ ಗಡಿಭಾಗದ ಬಿ ಎಂ.ಸೂಗೂರು ಗ್ರಾಮದ ಬಳಿ ನಡೆದಿರುವ ಈ ಘಟನೆಯಲ್ಲಿ ನೀರಿನಲ್ಲಿ ಕೊಚ್ಚಿಕೊಂಡುಹೋಗುತ್ತಿದ್ದವನನ್ನು ಸ್ಥಳೀಯರು ಯಶಸ್ವಿಯಾಗಿದ್ದಾರೆ. ಸಿಮಾಂಧ್ರದಲ್ಲಿ ಸುರಿದ ಮಳೆಯಿಂದಾಗಿ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಸೂಗೂರಿನ ಬಳಿ ತುಂಬಿ ಹರಿಯುತ್ತಿರುವ ಹಳ್ಳ ದಾಟುವ ವೇಳೆ ನೀರಿನ ರಭಸಕ್ಕೆ ಈ ವ್ಯಕ್ತಿ ಕೊಚ್ಚಿ ಕೊಂಡು ಹೋಗುತ್ತಿದ್ದ. ಇದನ್ನು ಕಂಡ ಸ್ಥಳೀಯರು ಹಗ್ಗದ ಸಹಾಯದ ಮೂಲಕ ಅವನ ರಕ್ಷಣೆ ಮಾಡಿದ್ದಾರೆ. ಈ ರಕ್ಷಣಾ ಕಾರ್ಯವನ್ನು ಮೊಬೈಲ್‌ನಲ್ಲಿ ಸೆರೆಹಿಡಿಯಲಾಗಿದ್ದು, ಈ ರೋಚಕ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ.
Read More News
T & CPrivacy PolicyContact Us