ಚಾಮರಾಜನಗರ ತಾಲೂಕಿನ ಶಿವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗಿದೆ ಎಂದು ಎಂಎಸ್‌ಐಎಲ್ ಅಧ್ಯಕ್ಷರು, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಹೇಳಿದರು. ತಾಲೂಕಿನ ಶಿವಪುರ ಗ್ರಾಮದಲ್ಲಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ, 15ನೇ ಹಣಕಾಸು ಯೋಜನೆಡಿಯಲ್ಲಿ ನಿರ್ಮಿಸಿರುವ ಗ್ರಾಮ ಪಂಚಾಯತಿ ನೂತನ ಹೆಚ್ಚುವರಿ ಕೊಠಡಿಯನ್ನು ಉದ್ಘಾಟಿಸಿ ಮಾತನಾಡಿದರು.