ಭೋವಿ ಸಮಾಜ ಸೇವಾ ಸಂಘದ ರಾಷ್ಟ್ರೀಯ ಅಧ್ಯಕ್ಷ ವೆಂಕಟೇಶ ಮೌರ್ಯ ಅವರು ಸೋಮವಾರ ಸಂಜೆ 4 ಗಂಟೆ ಸುಮಾರಿಗೆ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ಜಾರಿ ಮಾಡಿದೆ. ಸರ್ಕಾರ ಎಸ್‌ಇಪಿ, ಎಸ್‌ಟಿಪಿ ಹಣವನ್ನು ಗ್ಯಾರಂಟಿಗೆ ಬಳಕೆ ಮಾಡಿಕೊಂಡಿದ್ದಾರೆ. ರಾಜ್ಯದ ಜನರ ಅಭಿವೃದ್ಧಿಗೆ ಬೇರೆ ಬೇರೆ ಅಭಿವೃದ್ಧಿ ನಿಗಮ ಮಾಡಿದೆ. ಬಿಜೆಪಿ ಸರ್ಕಾರ ಭೋವಿ ನಿಗಮ ಮಾಡಿತ್ತು, ಅಲ್ಲದೇ ಬಿಜೆಪಿ ಸರ್ಕಾರ ಅನುದಾನ ನೀಡಿತ್ತು. ಈಗ ಸಿದ್ದರಾಮಯ್ಯ ಸರ್ಕಾರ ಕೂಡ ಅನುದಾನ ನೀಡಿದೆ. ಬಿಜೆಪಿ ಅವಧಿಯಲ್ಲಿಯೂ ಭೋವಿ ನಿಗಮದಲ್ಲಿ ಅ ವ್ಯವಹಾರ ಆಗಿತ್ತು. 85 ಕೋಟಿ ರೂಪಾಯಿ ಅವ್ಯವಹಾರದ ತನಿಖೆ ಇನ್ನೂ ಮುಗಿದಿಲ್ಲ, ಇದರ ನಡುವೆ ಮತ್ತೊಂದು ಹಗರಣ ಬೆಳಕಿಗೆ ಬಂದಿದೆ ಎಂದರು.