ಭೈರಪ್ಪನಹಳ್ಳಿ ಗ್ರಾಮಕ್ಕೆ ಅಧಿಕಾರಿಗಳು 35 ಗುಂಟೆ ಸರ್ಕಾರಿ ಜಾಗವನ್ನು ಪರಿಶಿಷ್ಟ ಸಮುದಾಯಕ್ಕೆಂದು ಸ್ಮಶಾನ ಜಾಗ ಕಾಯ್ದಿರಿಸಿ ಸುಮಾರು ನಾಲ್ಕು ವರ್ಷ ಕಳೆದರೂ ಜಾಗ ಹದ್ದು ಬಸ್ತು ಮಾಡಿ ಮಂಜೂರು ಮಾಡುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ. ತಾಲೂಕಿನ ಆಂಧ್ರದ ಗಡಿಭಾಗದಲ್ಲಿ ಇರುವ ಚೇಳೂರು ತಾಲೂಕಿನ ಭೈರಪ್ಪನಹಳ್ಳಿ ಗ್ರಾಮದಲ್ಲಿ ದಲಿತರಿಗೆ ಸಾರ್ವಜನಿಕ ಸ್ಮಶಾನ ಇಲ್ಲದೆ ಜನರು ಕೊನೆ ಗಳಿಗೆಯಲ್ಲಿ ಅಂತ್ಯ ಸಂಸ್ಕಾರ ಮಾಡಲು ಪರದಾಡುತ್ತಿದ್ದಾರೆ ಎಂದು ಗ್ರಾಮಸ್ಥರು ನೋವು ತೋಡಿಕೊಂಡಿದ್ದಾರೆ.