ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಎಲ್ಲೆಮಾಳ ಸಮೀಪದ ರಸ್ತೆಯಲ್ಲಿ ದ್ವಿಚಕ್ರವಾಹನ ಅಪಘಾತ ಸಂಭವಿಸಿ, ಇಬ್ಬರಿಗೆ ಪೆಟ್ಟಾಗಿರುವ ಘಟನೆ ನಡೆದಿದೆ. ಬೈಕ್ ಅಪಘಾತದಲ್ಲಿ ಸವಾರರಾದ ಕೃಷ್ಣಮೂರ್ತಿ ಹಾಗೂ ಕಾಳಶೆಟ್ಟಿ ರವರಿಗೆಗಾಯವಾಗಿದ್ದು, ತಕ್ಷಣ ಸ್ಥಳೀಯರು ಮಾಹಿತಿ ನೀಡಿದಂತೆ ಹನೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ನಂತರ ಗಾಯಾಳುಗಳನ್ನು 108 ಆಂಬುಲೆನ್ಸ್ ಮೂಲಕ ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದ ಕಾರಣ ಹಾಗೂ ಹೆಚ್ಚಿನ ಮಾಹಿತಿ ಕುರಿತಂತೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.