ರಾಜ್ಯ ಸರಕಾರವು ನಮ್ಮ ಬಂಜಾರ ಸಮುದಾಯಕ್ಕೆ ಬಹಳ ದೊಡ್ಡ ಅನ್ಯಾಯ ಮಾಡಿದೆ. ಇದನ್ನು ಕೂಡಲೇ ಸರಿಪಡಿಸಿ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿ ಸರ್ಕಾರದ ವಿರುದ್ಧ ಸೆಪ್ಟೆಂಬರ್ 10 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.