ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಜಮೀನು ಕಳೆದುಕೊಳ್ಳುವ ರೈತರಿಗೆ ನ್ಯಾಯಯುತವಾದ ಪರಿಹಾರ ಒದಗಿಸಲು ಸರಕಾರ ಬದ್ಧವಾಗಿದೆ. ಸಂತ್ರಸ್ತರಿಗೆ ಸೂಕ್ತ ಪುನರ್ವಸತಿಯನ್ನು ಕಲ್ಪಿಸುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮುಳುಗಡೆ ಹೊಂದಲಿರುವ ಜಮೀನನ್ನು ಎರಡು ಹಂತದಲ್ಲಿ ಭೂಸ್ವಾಧೀನಕ್ಕೆ ಒಳಪಡಿಸುವ ಬದಲು ಒಂದೆ ಹಂತದಲ್ಲಿ ಸ್ವಾಧೀನಪಡಿಸಲು ಈಗಾಗಲೇ ತೀರ್ಮಾನಿಸಲಾಗಿದೆ ಎಂದು ಹೇಳಿದರು.