ಕೆ.ಎಂ.ದೊಡ್ಡಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಸೆ.6 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಸೆಸ್ಕಾಂ ಇಲಾಖೆ ಅದಿಕಾರಿಗಳು ತಿಳಿಸಿದ್ದಾರೆ. 66/11 ಕೆ.ವಿ ಕೆ.ಎಂ.ದೊಡ್ಡಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 11 ಕೆ.ವಿ ಪರಿವರ್ತಕ ಲೈನ್ ಮತ್ತು ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಮಾರ್ಗಗಳ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಕೆ.ಎಂ.ದೊಡ್ಡಿ, ಗುಡಿಗೆರೆ, ಅಂಬರಹಳ್ಳಿ, ಬಿದರಹಳ್ಳಿ, ಡಿ.ಎ.ಕೆರೆ, ಯಲಾದಹಳ್ಳಿ, ಮುಟ್ಟನಹಳ್ಳಿ, ಆತ್ಮಲಿಂಗೇಶ್ವರ ಕ್ಷೇತ್ರ, ಮಡೇನಹಳ್ಳಿ, ತೊರೆಬೊಮ್ಮನಹಳ್ಳಿ, ಮೆಣಸಗೆರೆ ಫೀಡರ್ಗಳ ವ್ಯಾಪ್ತಿಯಲ್ಲಿ ಸೆ. 6 ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.