ಸರ್ಕಾರಿ ಸಾರ್ವಜನಿಕರ ಆಸ್ಪತ್ರೆ ಬೂದಿಕೋಟೆ ಆಸ್ಪತ್ರೆಯಲ್ಲಿ ಅವಾಚ್ಯ ಶಬ್ದಗಳಿಂದ ಬೈದು ಬರುವ ರೋಗಿಗಳಿಗೆ ಚಿಕಿತ್ಸೆ ಕೊಡಲು ಹಿಂಜರಿಯುತ್ತಿದ್ದ ಕಲಾವತಿ ಅವರನ್ನು ಕೆಲಸದಿಂದ ರದ್ದು ಮಾಡಲು ನವ ಕರ್ನಾಟಕ ಸ್ವಾಭಿಮಾನ ವೇದಿಕೆಯಿಂದ ಜಿಲ್ಲೆ ಆರೋಗ್ಯ ಅಧಿಕಾರಿ ತಾಲೂಕು ಆರೋಗ್ಯ ಅಧಿಕಾರಿ ಅವರಿಗೆ ಸೋಮವಾರ ಮನವಿ ಪತ್ರ ಸಲ್ಲಿಸಲಾಯಿತು.ಇತ್ತೀಚೆಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿರುವ ವೀಡಿಯೋ ವೈರಲ್ ಸಹ ಆಗಿತ್ತು. ಈ ಸಂದರ್ಭದಲ್ಲಿ ಬಂಗಾರಪೇಟೆ ತಾಲೂಕು ಅಧ್ಯಕ್ಷರಾದ ಪ್ರವೀಣ್ ಕುಮಾರ್ ಮಹಿಳಾ ಘಟಕ ಅಧ್ಯಕ್ಷರಾದ ಯುವ ಘಟಕ ಉಪಾಧ್ಯಕ್ಷರಾದ ಅನಿಲ್ ಕುಮಾರ್ ಸಿ ಜಿಲ್ಲಾ ಯುವ ಘಟಕ ಅಧ್ಯಕ್ಷರಾದ ನಾರಾಯಣ ಚಾರಿ ಪತ್ರಕರ್ತರಾದ ಅನಿಲ್ ಕುಮಾರ್ ಕಾರ್ಯದರ್ಶಿಗಳಾದ ಶಿವ ಶ್ರೀಕಾಂತ್ ಸಂತೋಷ್ ಮತ್ತಿತರಿದ್ದರು