ರಾಜ್ಯ ಸರ್ಕಾರ ಕನ್ನಡಪರ ಹೋರಾಟಗಾರರ ಪ್ರಕರಣಗಳನ್ನು ಹಿಂಪಡೆದಿದೆ. ಇದು ಸ್ವಾಗತಾರ್ಹವಾಗಿದೆ. ಕನ್ನಡ ನೆಲ, ಜಲಕ್ಕಾಗಿ ಹೋರಾಟ ಮಾಡಲಾಗುತ್ತಿತ್ತು. ಈ ವೇಳೆ ಅನಾವಶ್ಯಕವಾಗಿ ಪೊಲೀಸರು ಪ್ರಕರಣಗಳನ್ನು ದಾಖಲಿಸುತ್ತಿದ್ದರು. ಈಗ ಕನ್ನಡಪರ ಹೋರಾಟಗಾರರ ಎಲ್ಲ ಪ್ರಕರಣ ಹಿಂಪಡೆಯುವುದಾಗಿ ಕಾನೂನು ಸಚಿವ ಎಚ್.ಕೆ ಪಾಟೀಲ ಘೋಷಿಸಿದ್ದು ಸಂತಸ ತಂದಿದೆ ಅಂತ ಹೇಳಿದರು.