ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಮೃತದೇಹ ಪತ್ತೆ, ಸುದ್ದಗುಂಟೆಪಾಳ್ಯ ವ್ಯಾಪ್ತಿಯಲ್ಲಿ ಘಟನೆ ವಿವಾಹಿತ ಮಹಿಳೆಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ಆಗಸ್ಟ್ 26ರಂದು ರಾತ್ರಿ 9 ಗಂಟೆ ಸುಮಾರಿಗೆ ಮನೆಯಲ್ಲಿಯೇ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶಿಲ್ಪಾ ಎಂಬಾಕೆಯ ಮೃತದೇಹ ಪತ್ತೆಯಾಗಿದ್ದು, ಆಕೆಯ ಪತಿ ಪ್ರವೀಣ್ ವಿರುದ್ಧ ವರದಕ್ಷಿಣೆ ಕಿರುಕುಳದ ಆರೋಪ ಕೇಳಿ ಬಂದಿದೆ. ನಾಗಸಂದ್ರದ ನಿವಾಸಿಯಾಗಿದ್ದ ಶಿಲ್ಪಾಗೆ ಎರಡೂವರೆ ವರ್ಷದ ಹಿಂದೆ ಪ್ರವೀಣ್ ಜೊತೆ ವಿವಾಹವಾಗಿದ್ದು, ಒಂದೂವರೆ ವರ್ಷದ ಮಗು ಸಹ ಇದೆ.26ರಂದು ರಾತ್ರಿ ವೇಳೆ ಮನೆಯಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಶಿಲ್ಪಾ ಮೃತದೇಹ ಪತ್ತೆಯಾಗಿದೆ.