ಮದ್ದೂರು ಪಟ್ಟಣದಲ್ಲಿ ಅದ್ದೂರಿಯಾಗಿ ಸಾಮೂಹಿ ಗಣೇಶಮೂರ್ತಿಗಳ ವಿಸರ್ಜನಾ ಮೆರವಣಿಗೆಯಲ್ಲಿ ರಾಜ್ಯನಾಯಕರುಗಳು ಭಾಗವಹಿಸಿದ್ದರು. ಭಾನುವಾರ ರಾತ್ರಿ ಪಟ್ಟಣದ ರಾಮ್ ರಹೀಂ ನಗರದಲ್ಲಿ ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ಮೇಲೆ ಕಲ್ಲು ತೂರಾಟ ಘಟನೆ ಹಿನ್ನೆಲೆಯಲ್ಲಿ ಅದರ ಭಾಗವಾಗಿ ಬುಧವಾರ ಸಹಸ್ರಾರು ಸಂಖ್ಯೆಯ ಬಿಜೆಪಿ, ಜೆಡಿಎಸ್ ಹಾಗೂ ಹಿಂದೂಪರ ಸಂಘಟನೆಗಳು ಕಾರ್ಯಕರ್ತರು ಅದ್ಧೂರಿಯಾಗಿ ನಡೆದ ಸಾಮೂಹಿಕ ಗಣೇಶಮೂರ್ತಿಗಳ ವಿಸರ್ಜನಾ ಮೆರವಣಿಗೆಯು ಪೊಲೀಸ್ ಸರ್ಪಗಾವಲಿನಲ್ಲಿ ನಡೆಯಿತು. ಮದ್ದೂರು ಪಟ್ಟಣದ ಮಳವಳ್ಳಿ ರಸ್ತೆಯ ಬಿಜೆಪಿ ಕಚೇರಿ ಮುಂಭಾಗದಿಂದ ಸುಮಾರು 14 ಗಣೇಶಮೂರ್ತಿಗಳು 3 ಕಿ.ಮೀ ಉದ್ದದ ಮೆರವಣಿಗೆಯು ಶಿಂಷಾ ನದಿಯವರೆಗೂ ನಡೆ