ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(AIMSS) ಹಾಗೂ ಕಾಲೇಜಿನ ಮಹಿಳಾ ಸಬಲೀಕರಣ ಘಟಕದಿಂದ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನದ ಪ್ರಯುಕ್ತ ಮಾನಸಿಕ ಆರೋಗ್ಯ ಮತ್ತು ಆತ್ಮಹತ್ಯೆ ತಡೆ ಜಾಗೃತಿ ಕಾರ್ಯಕ್ರಮ ಇಂದು ನಡೆಯಿತು. ಸೆಪ್ಟೆಂಬರ್ 11. ರಂದು ಮಧ್ಯಾಹ್ನ 3-30 ಗಂಟೆಗೆ ನಡೆದ ಕಾರ್ಯಕ್ರಮದಲ್ಲಿ AIMSS ನ ರಾಜ್ಯ ಕಾರ್ಯದರ್ಶಿ ಹಾಗೂ ಕಾರ್ಯಕ್ರಮದ ಮುಖ್ಯ ಉಪನ್ಯಾಸ ನೀಡಿದ ಶೋಭಾ ಎಸ್. ಮಾತನಾಡಿ "ಒತ್ತಡದ ಜೀವನ ಹಲವಾರು ಸವಾಲುಗಳನ್ನು, ಸಮಸ್ಯೆಗಳನ್ನು ತಂದೊಡ್ಡುತ್ತಿರುವ ಈ ಸಂದರ್ಭದಲ್ಲಿ ಇದು ಅತ್ಯಂತ ಅವಶ್ಯಕವಾದ ಕಾರ್ಯಕ್ರಮ. ಮಾನಸಿಕ ಸಮಸ್ಯೆಗಳ ಕುರಿತು ಸಮಾಜದಲ್ಲಿ ಇಂದಿಗೂ ತಪ್ಪು ಕಲ್ಪನೆ