ಚಿಕ್ಕಮಗಳೂರು ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಪಕ್ಕದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಯ ನೂತನ ಕಟ್ಟಡದ ಕಾಮಗಾರಿಯನ್ನು ಕೃಷಿ ಇಲಾಖೆ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾಕ್ಟರ್ ಕೆ ಪಿ ಅಂಶುಕಂತ್, ಜಿಲ್ಲೆಯ ಶಾಸಕರುಗಳು ಉಪಸ್ಥಿತರಿದ್ದರು.