ಚಿತ್ರದುರ್ಗ:-ರಾಜ್ಯ ಸರ್ಕಾರ ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಮಾಲೀಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಮತ್ತೊಮ್ಮೆ ಟ್ರಾಫಿಕ್ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50 ರಷ್ಟು ರಿಯಾಯಿತಿ ಘೋಷಿಸಿ ಆದೇಶಿಸಿದೆ. ಈ ಹಿಂದೆ ಶೇ. 50ರಷ್ಟು ರಿಯಾಯಿತಿ ನೀಡಿ ಭಾರಿ ಮೊತ್ತದ ದಂಡ ಸಂಗ್ರಹಿಸಿದ್ದ ರಾಜ್ಯ ಸರ್ಕಾರ ಇದೀಗ ಮತ್ತೊಮ್ಮೆ ರಿಯಾಯಿತಿ ಘೋಷಣೆ ಮಾಡಿದ್ದು, ಆಗಸ್ಟ್ 23 ರಿಂದ ಸೆಪ್ಟೆಂಬರ್ 9ರವರೆಗೆ ದಂಡದ ಅರ್ಧದಷ್ಟು ಹಣ ಪಾವತಿಸಲು ವಾಹನ ಸವಾರರಿಗೆ ಅವಕಾಶ ಕಲ್ಪಿಸಲಾಗಿದೆ.