ಯಾದಗಿರಿ ಜಿಲ್ಲೆಯ ಗುರುಮಠಕಲ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗ್ರಾಮೀಣ ಭಾಗದಲ್ಲಿ ಕರ್ನಾಟಕ ಭೂಸೇನೆ ನಿಗಮದಿಂದ ನಿರ್ಮಿಸಿರುವ ರಸ್ತೆ ಕಾಮಗಾರಿಗಳು ಸಂಪೂರ್ಣ ಕಳಪೆಯಾಗಿ ನಿರ್ಮಿಸಿದ ಎರಡೇ ತಿಂಗಳಲ್ಲಿ ಕಿತ್ತುಕೊಂಡು ಹೋಗಿವೆ ಶಾಸಕರು ಗಮನಿಸಿದರೆ ಇರುವುದು ಅನುಮಾನಕ್ಕೆ ಕಾರಣವಾಗಿದೆ, ಜಿಲ್ಲಾಧಿಕಾರಿಗಳು ತನಿಖಾ ತಂಡ ರಚನೆ ಮಾಡಿ ಕಳಪೆ ಕಾಮಗಾರಿ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.