ಗೌರಿಬಿದನೂರು ತಾಲೂಕಿನ ಮೇಳ್ಯ ಗ್ರಾಮದಲ್ಲಿ ತಂದೆಯಿಂದ ತಾಯಿಗೆ ಬರುತ್ತಿದ್ದ ಪಿಂಚಣಿ ಹಣಕ್ಕಾಗಿ ಅಣ್ಣತಮ್ಮಂದಿರ ನಡುವೆ ಗಲಾಟೆ ನಡೆದಿದ್ದು, ಕೊಲೆಯಲ್ಲಿ ಅಂತ್ಯವಾಗಿದೆ. ಮೇಳ್ಯ ಗ್ರಾಮದ ನರಸಿಂಹಮೂರ್ತಿ (55) ಕೊಲೆಯಾದ ವ್ಯಕ್ತಿಯಾಗಿದ್ದು,ರಾಮಾಂಜಿ (39)ಹಾಗೂ ಗಂಗಾಧರಪ್ಪ (36) ಕೊಲೆ ಮಾಡಿದ ಆರೋಪಿಗಳಾಗಿದ್ದಾರೆ. ಪಿಂಚಣಿ ಹಣಕ್ಕಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ದೊಣ್ಣೆಗಳಿಂದ ಹೊಡೆದು ನರಸಿಂಹಮೂರ್ತಿ ಯನ್ನು ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿ, ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.