ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ನಗರದ ಹೊರವಲಯದಲ್ಲಿರುವ ಸೋಮನಕೊಪ್ಪ ಬಳಿ ನಡೆದಿದೆ. ಗುರುವಾರ ಈ ಘಟನೆ ನಡೆದಿದ್ದು, ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಓರ್ವ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಆತನ ಬಗ್ಗೆ ಇದುವರೆಗೆ ಮಾಹಿತಿ ಲಭ್ಯವಾಗಿಲ್ಲ. ಇನ್ನಾ ಸ್ಥಳೀಯರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದು, ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.