ಕಳ್ಳತನವಾದ 48 ಗಂಟೆಯೊಳಗೆ ಇಬ್ಬರು ಅಂತರ ಜಿಲ್ಲಾ ಕಳ್ಳರನ್ನು ಹೊಸನಗರ ತಾಲೂಕು ನಗರ ಠಾಣೆ ಪೊಲೀಸರು ಭಾನುವಾರ ಸಂಜೆ 5 ಗಂಟೆಗೆ ಬಂಧಿಸಿದ್ದಾರೆ. ಇವರಿಂದ 4 ಲಕ್ಷ ಮೌಲ್ಯದ ಚಿನ್ನಾಭರಣ, ಒಂದು ದ್ವಿಚಕ್ರ ವಾಹನ ವಶಕ್ಕೆ ಪಡೆದಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸಮಗಾರ ಓಣಿಯ ಹನುಮಂತ ತೊಳೆಯಪ್ಪ (26) ಮತ್ತು ಮಂಜುನಾಥ ಬಿಸುಕಲ್ಲೊಡ್ಡರ (36) ಬಂಧಿತರು. ಹೊಸನಗರದ ಕಬಳೆ ಗ್ರಾಮದ ರಿಚರ್ಡ್ ಡಿಸೋಜಾ ಮತ್ತು ಮಾಸ್ತಿಕಟ್ಟೆಯ ಶೇಷಾದ್ರಿ ಎಂಬುವವರ ಮನೆಯಲ್ಲಿ ಆ.21ರಂದು ಕಳ್ಳತನವಾಗಿತ್ತು. ರಿಚರ್ಡ್ ಡಿಸೋಜಾ ಅವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಗಿಲಿನ ಬೀಗ ಮುರಿದು 1.66 ಲಕ್ಷ ಮೌಲ್ಯದ 31 ಗ್ರಾಂ ಚಿನ್ನಾಭರಣ, 70 ಸಾವಿರ ನಗದು ಕಳ್ಳತನ ಮಾಡಲಾಗಿತ್ತು.