ಈರುಳ್ಳಿ ಬೆಳೆಗೆ ಎಕೆರೆಗೆ 50,000 ಪರಿಹಾರ ಮತ್ತು ಈರುಳ್ಳಿ ಬೆಳೆಗೆ ಬೆಂಬಲ ಬೆಲೆ ಘೋಷಣೆ ಮಾಡಿ ಖರೀದಿ ಕೇಂದ್ರ ತೆರೆಯುವಂತೆ ಒತ್ತಾಯಿಸಿ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಚಿತ್ರದುರ್ಗ ಜಿಲ್ಲಾ ಘಟಕದ ವತಿಯಿಂದ ಸೋಮವಾರ ಮಧ್ಯಾಹ್ನ 12 ಗಂಟೆಗೆ ಪ್ರವಾಸಿ ಮಂದಿರದಿಂದ ಕಚೇರಿ ವರೆಗೆ ಮೆರವಣಿಗೆ ಮೂಲಕ ಬಂದು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ್ದಾರೆ.