ಶಾಸಕ ಡಾ. ಚಂದ್ರು ಕೆ ಲಮಾಣಿ ಅವರು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಪಟ್ಟಣದ ಬಾಲಾಜಿ ಆಸ್ಪತ್ರೆಯಲ್ಲಿ ಸ್ವೀಕಾರ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ವೇಳೆ ಕೆಲ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಿದರು. ಇನ್ನೂ ಕೆಲವು ಜಟಿಲ ಸಮಸ್ಯೆಗಳನ್ನು ಅಧಿಕಾರಿಗಳ ಜೊತೆ ಚರ್ಚಿಸಿ ಶೀಘ್ರದಲ್ಲಿ ಬಗೆಹರಿಸಲಾಗುವುದು ಅಂತ ಭರವಸೆ ನೀಡಿದರು.