ಪ್ರಸ್ತುತ ಗೌರಿ ಗಣೇಶ ಹಬ್ಬ ಹಾಗೂ ಮುಂಬರುವ ಈದ್ ಮಿಲಾದ್ ಹಬ್ಬದ ಹಿನ್ನೆಲೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದಲ್ಲಿ ಪೊಲೀಸರಿಂದ ರೂಟ್ ಮಾರ್ಚ್ ನಡೆಸಲಾಯಿತು. ಶಿವಮೊಗ್ಗ ಜಿಲ್ಲೆಯ ಎಎಸ್‌ಪಿ ಎಸ್.ರಮೇಶ್ ಕುಮಾರ್ ಅವರ ನೇತೃತ್ವದಲ್ಲಿ ರಿಪ್ಪನ್ ಪೇಟೆ ಟೌನ ಠಾಣೆಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮತ್ತು ಕಡೆಗಳನ್ನು ಒಳಗೊಂಡಂತಹ ತಂಡ ರಿಪನ್ ಪೇಟೆಯ ಪ್ರಮುಖ ಬೀದಿಗಳಲ್ಲಿ ಪಥ ಸಂಚಲನವನ್ನು ಗುರುವಾರ ನಡೆಸಿದರು.