ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಆರೋಪ ಪ್ರಕರಣದಲ್ಲಿ ಬಿಜೆಪಿ ಜೆಡಿಎಸ್ ನಿಂದ ಧರ್ಮಸ್ಥಳ ಚಲೋ ವಿಚಾರವಾಗಿ ವಿಜಯಪುರದಲ್ಲಿ ಸಚಿವ ಎಂ ಬಿ ಪಾಟೀಲ್ ಪ್ರತಿಕ್ರಿಯೆ ನೀಡಿ ಧರ್ಮಸ್ಥಳ ಚಲೋ ಗೆ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯವಾಡಿದರು. ದೇವರ ಹೆಸರಿನಲ್ಲಿ ರಾಜಕಾರಣ ಮಾಡೋದು ಬಿಟ್ಟು ಕೇಂದ್ರಕ್ಕೆ ಹೋಗಲಿ, ರಾಜ್ಯಕ್ಕೆ ಬರಬೇಕಾದ ಅನುದಾನದ ಬಗ್ಗೆ ಚಿಂತೆಯಿಲ್ಲ. ವಿವಿಧ ಯೋಜನೆಗಳಿಗೆ ಕೇಂದ್ರ ಸರ್ಕಾರ ಕೊಡಬೇಕಾದ ಅನುದಾನ ಬಗ್ಗೆ ಚಿಂತೆಯಿಲ್ಲ ಎಂದರು.