ಪರವಾನಗಿ ಇಲ್ಲದೆ ರಸ ಗೊಬ್ಬರಗಳ ದಾಸ್ತನು, ಮಾರಾಟ ಮತ್ತು ಕಾಳಸಂತೆಯಲ್ಲಿ ರಸಗೊಬ್ಬರ ಮಾರಾಟ ಮಾಡುವವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಎಚ್ಚರಿಕೆ ನೀಡಿದ್ದಾರೆ. ದೇವನಹಳ್ಳಿ ತಾಲ್ಲೂಕಿನ ಜಿಲ್ಲಾಡಳಿತ ಭವನದಲ್ಲಿ ಶನಿವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಕೃಷಿ ಇಲಾಖೆಯಿಂದ ನಡೆದ ಮುಂಗಾರು ಹಂಗಾಮಿನ ರಸಗೊಬ್ಬರ ತಯಾರಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಸಗೊಬ್ಬರ ದಾಸ್ತಾನು ಮತ್ತು ಗರಿಷ್ಟ ಮಾರಾಟ (ಎಂಆರ್‌ಪಿ) ದರ ವಿವರವನ್ನು ಸಾರ್ವಜನಿಕರಿಗೆ ಎದ್ದು ಕಾಣುವಂತೆ ಪ್ರಮುಖವಾದ ಸ್ಥಳದಲ್ಲಿ ಪ್ರದರ್ಶಿಸಬೇಕು.