ಶೂದ್ರ ಶ್ರಮಿಕ ವರ್ಗಗಳಿಗೆ ಆರ್ಥಿಕ ಚೈತನ್ಯ ಕೊಡಲು ಅಂದು ಭಾಗ್ಯಗಳು-ಇಂದು ಗ್ಯಾರಂಟಿಗಳು ವರದನವಾಗಿವೆ. ನಮ್ಮ ಸರ್ಕಾರ ಜಾತಿ ನೋಡಲ್ಲ. ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೆ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಜಿಲ್ಲಾಡಳಿತ ಆಯೋಜಿಸಿದ್ದ ಭಗೀರಥ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಬಳಿಕ, "ಉಪ್ಪಾರ ಸಮುದಾಯ ಭವನದ" ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಈ ನೆಲದ ದಾರ್ಶನಿಕರು, ಮಹಾನುಭಾವರ ಮನುಕುಲದ ಕೊಡುಗೆ ಗಮನಿಸಿ ಅವರೆಲ್ಲರ ಜಯಂತಿಯನ್ನು ಸರ್ಕಾರವೇ ಆಚರಿಸುತ್ತಿದೆ.