ಧರ್ಮಸ್ಥಳ ಪುಣ್ಯಕ್ಷೇತ್ರ ಬಗ್ಗೆ ಅಪಪ್ರಚಾರ ಮಾಡುತ್ತಿರುವುದನ್ನು ಖಂಡಿಸಿ ರಾಜ್ಯ ಬಿಜೆಪಿ ಘಟಕ ಕರೆ ನೀಡಿದ್ದ ಧರ್ಮದ ಉಳಿವಿಗಾಗಿ ಧರ್ಮ ಯುದ್ಧ ಎಂಬ ಘೋಷಣೆಯೊಂದಿಗೆ ಶನಿವಾರ ಹಾವೇರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಿ, ಅಪಪ್ರಚಾರ ಮಾಡುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ ಎನ್ ಐಎಗೆ ಪ್ರಕರಣ ವರ್ಗಾಯಿಸುವಂತೆ ಆಗ್ರಹಿಸಲಾಯಿತು. ನಗರದ ಪುರಸಿದ್ದೇಶ್ವರ ದೇವಸ್ಥಾನ ಬಳಿ ಜಮಾವಣೆಗೊಂಡಿದ್ದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಧರ್ಮದ ಉಳಿವಿಗಾಗಿ ಧರ್ಮಯುದ್ಧ ಪಾದಯಾತ್ರೆ ನಡೆಸಿದರು.