ಭಟ್ಕಳ: ರಾಷ್ಟ್ರೀಯ ಹೆದ್ದಾರಿಯಲ್ಲಿ ಭಟ್ಕಳ ತಾಲೂಕು ಪಂಚಾಯತ ಸಮೀಪ ಟ್ಯಾಂಕರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಮೃತನ ಪತ್ನಿ ಸ್ವಲ್ಪದರಲ್ಲೆ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.ಮೃತನು ಮುರುಡೇಶ್ವರ ಬಸ್ತಿಯ ದೇವಿಕಾನ್ ನಿವಾಸಿಯಾಗಿದ್ದು, ಇವರು ಮೂಲತಃ ಕರಿಕಲ್ ಗ್ರಾಮದವರು ಎಂದು ತಿಳಿದುಬಂದಿದೆ.