ಯಾವುದೇ ರೈತರು ಸರದಿ ಸಾಲಲಿ ನಿಂತು ಕಾಯದಂತೆ, ಸಣ್ಣ ರೈತರು ಸೇರಿದಂತೆ ಎಲ್ಲರಿಗೂ ಸಮರ್ಪಕ ಗೊಬ್ಬರ ವಿತರಣೆಗೆ ಅಗತ್ಯ ಕ್ರಮವಹಿಸಬೇಕು ಎಂದು ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು ಕೃಷಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ರಾಯಚೂರ ತಾಲೂಕು ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಸೆ.2ರಂದು ನಡೆದ ರಾಯಚೂರು ತಾಲೂಕು ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮೊದಲನೇ ಬೆಳೆಗೆ ಸಹಜವಾಗಿ ರಸಗೊಬ್ಬರದ ಬೇಡಿಕೆ ಹೆಚ್ಚಿರುತ್ತದೆ. ಎರಡನೇ ಬೆಳೆಗೆ ಒತ್ತಡ ಇರುವುದಿಲ್ಲ. ಗೊಂದಲಕ್ಕೆ ಅವಕಾಶವಿಲ್ಲದ ಹಾಗೆ ಶಿಸ್ತುಬದ್ಧವಾಗಿ ರಸಗೊ