ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡುವ ವಿಷಯದಲ್ಲಿ ಸರ್ಕಾರ ಗಂಭೀರತೆಯನ್ನು ತೋರಿಸದೆ ಇರುವುದರಿಂದ ವಿದ್ಯಾರ್ಥಿಗಳು ತರಗತಿಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಆರೋಪಿಸಿ ಎಬಿವಿಪಿ ನೇತೃತ್ವದಲ್ಲಿ ಚಿಕ್ಕಮಗಳೂರು ನಗರದ ಐಡಿಎಸ್‌ಜಿ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆಯನ್ನು ನಡೆಸಿದರು.