ಖರೀದಿಸಿದ ಮನೆಯನ್ನು ತನ್ನ ಹೆಸರಿಗೆ ಮಾಡಿಕೊಡಲು ಮಹಾನಗರ ಪಾಲಿಕೆಯ ಆಶ್ರಯ ಮನೆ ವಿಭಾಗದ ಸಮುದಾಯ ಸಂಘಟನಾಧಿಕಾರಿ ಲಂಚ ಪಡೆಯುತ್ತಿರುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಶಿಧರ ಎ.ಪಿ (57) ಸಿಕ್ಕಿಬಿದ್ದ ಅಧಿಕಾರಿ. ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಯ ವಾಸಿ ಮೊಹಮ್ಮದ್ ಆಸೀಫ್ ಉಲ್ಲಾ ಎನ್ನುವವರು ಬೊಮ್ಮನಕಟ್ಟೆಯಲ್ಲಿ ಅಮ್ಜದ್ ಅಲಿ ಎನ್ನುವವರಿಂದ ಮನೆಯನ್ನು ಖರೀದಿಸಿದ್ದರು. ಈ ಮನೆಯನ್ನು ತನ್ನ ಹೆಸರಿಗೆ ಮಾಡಿಕೊಡಲು ಅರ್ಜಿ ಸಲ್ಲಿಸಿದಾಗ 10 ಸಾವಿರ ರೂ. ಲಂಚ ಕೇಳಿದ್ದರು. ಹಣವನ್ನು ಕೊಡಲು ಇಷ್ಟವಿಲ್ಲದ ಕಾರಣ ಲೋಕಾಯುಕ್ತ ಪೊಲೀಸರಿಗೆ ಮಾಹಿತಿ ನೀಡಿದ್ದರು