ಯಾದಗಿರಿ ನಗರದ ವಿದ್ಯುತ್ ನೌಕರರ ಭವನದಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘಟನೆಯ 9ನೇ ರಾಜ್ಯ ಸಮ್ಮೇಳನ ನಡೆಯಿತು. ಶುಕ್ರವಾರ ಸಂಜೆವರೆಗೂ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿಐಟಿಯು ರಾಜ್ಯ ಅಧ್ಯಕ್ಷ ವರಲಕ್ಷ್ಮಿ ಅವರು ಭಾಗವಹಿಸಿದ್ದರು. ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಲವೇಶ್ ಹೋರಾಡಿ ಅವರು ಕೂಡ ಭಾಗವಹಿಸಿ ಮಾತನಾಡಿದರು. ಜಿಲ್ಲೆಯ 12 ಗ್ರಾಮ ಪಂಚಾಯಿತಿಯ ನೌಕರರು ಸಮ್ಮೇಳನದಲ್ಲಿ ಭಾಗವಹಿಸಿದ್ದರು.