ಯಾದಗಿರಿ ಜಿಲ್ಲೆಯ ವಡಿಗೇರ ತಾಲೂಕಿನ ಹುಂಡೆಕಲ್ ಗ್ರಾಮಕ್ಕೆ ಶನಿವಾರ ಮಧ್ಯಾಹ್ನ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಓರಡಿಯಾ ಭೇಟಿ ನೀಡಿ ಗ್ರಾಮದಲ್ಲಿನ ಸಮಸ್ಯೆಗಳನ್ನು ಪರಿಶೀಲಿಸಿದರು. ಕಳೆದ ಕೆಲವು ದಿನಗಳ ಹಿಂದೆ ಗ್ರಾಮದ ಜನರು ಸಾಮಾಜಿಕ ಹೋರಾಟಗಾರ ಉಮೇಶ ಮುದ್ನಾಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಒತ್ತಾಯಿಸಿದ್ದರು. ಪ್ರತಿಭಟನೆಗೆ ಸ್ಪಂದಿಸಿ ಸಿಇಒ ಗ್ರಾಮಕ್ಕೆ ಭೇಟಿ ನೀಡಿದಾಗ, ಗ್ರಾಮದಲ್ಲಿನ ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಒಂದು ವಾರದಲ್ಲಿ ಸ್ವಚ್ಛತೆಗೆ ಕ್ರಮ ಕೈಗೊಳ್ಳಲು ಸೂಚಿಸಿದರು.