ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಸಂಜೆ 5 ಗಂಟೆ ಸುಮಾರಿಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ವಿವಿಧ ಪೌರ ಕಾರ್ಮಿಕ ಸಂಘಟನೆಗಳ ಬೇಡಿಕೆ ಕುರಿತು ಸಭೆ ನಡೆಸಿದ್ದು, ಸಭೆಯಲ್ಲಿ ಸಚಿವ ಭೈರತಿ ಸುರೇಶ್, ಹಾಗೂ ಪೌರ ಕಾರ್ಮಿಕರ ಸಂಘಟನೆಗಳ ಪ್ರತಿನಿಧಿಗಳು ಭಾಗಿಯಾಗಿದ್ದು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿಯಿರುವ ಪೌರಕಾರ್ಮಿಕರ ಹುದ್ದೆಗಳಿಗೆ ನೇಮಕಾತಿ ಸೇರಿದಂತೆ ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.