ಆಡಳಿತದಲ್ಲಿ ಪಾರದರ್ಶಕತೆ ತರಲು ಪಂಚಾಯತ್ ರಾಜ್ಯ ವ್ಯವಸ್ಥೆಯಲ್ಲಿ ನೇರವಾಗಿ ಜನರ ಸಹಭಾಗಿತ್ವದಲ್ಲಿ ಪರಿಶೀಲನೆ ಮಾಡಲು ಸರಕಾರ ಜಮಾಬಂದಿ ಕಾರ್ಯಕ್ರಮ ಜಾರಿಗೆ ತಂದಿದೆ ಎಂದು ನೋಡಲ್ ಅಧಿಕಾರಿ ಹಾಗೂ ತೋಟಗಾರಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶಿವಕುಮಾರಿ ಹೇಳಿದರು. ತಾಲೂಕಿನ ಚಿಕ್ಕ ಅಂಕಂಡಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜಮಾ ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜಮಾ ಬಂದಿ ಕಾರ್ಯಕ್ರಮದಲ್ಲಿ ಹಿಂದಿನ ವರ್ಷದ ಏಪ್ರಿಲ್ 1 ರಿಂದ ಮಾರ್ಚ್ 31 ರವರೆಗೆ ಎಲ್ಲ ಕಾಮಗಾರಿಗಳ ಖರ್ಚು-ವೆಚ್ಚದ ಬಗ್ಗೆ ಜನರಿಗೆ ಹಾಗೂ ಸದಸ್ಯರಿಗೆ ಸಭೆಯಲ್ಲಿ ಅಧಿಕಾರಿಗಳು ಓದಿ ತಿಳಿಸುವುದು ಹಾಗೂ ಆಕ್ಷೇಪಣೆಗಳು ಬಂದಲ್ಲಿ ಪರಿಶೀಲನೆ ನಡೆಸಿ ಅನುಮಾನ ಪರಿಹರಿಸಿಕೊಳ್ಳಬಹುದು ಎಂದು ಹೇಳಿದರು