ರಾಜ್ಯ ಸರ್ಕಾರವು ಒಳ ಮೀಸಲಾತಿಯಲ್ಲಿ ಸಮಪಾಲು ನೀಡಿದ ಹಿನ್ನಲೆಯಲ್ಲಿ ನಗರದ ಬಾಬುಜಗಜೀವನರಾಂ ಬಡಾವಣೆಯಲ್ಲಿ ದಲಿತ ಮುಖಂಡರು, ಯುವಕರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು. ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನರಾಂ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ ದಲಿತ ಮುಖಂಡ ಎಂ.ಶಿವಮೂರ್ತಿ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ಮಾದಿಗ ಸಮುದಾಯ ಸುಮಾರು 30 ವರ್ಷಗಳಿಂದ ಒಳಮೀಸಲಾತಿ ಜಾರಿಗಾಗಿ ಹೋರಾಟ ನಡೆಸಿಕೊಂಡು ಬಂದಿದ್ದು ಇದರ ಫಲವಾಗಿ ಒಳ ಮೀಸಲಾತಿಯಲ್ಲಿ ಸಮಪಾಲು ನೀಡಿರುವುದು ಸ್ವಾಗತಾರ್ಹ ಎಂದರು.